
ಮೈಸೂರು: ಯುಗಾದಿ ಹಿನ್ನೆಲೆಯಲ್ಲಿ ಪುಣ್ಯ ಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನದಿಗೆ ಇಳಿದಿದ್ದ ಬಾಲಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ನಡೆದಿದೆ.
ಶರಣ್ (13) ಮೃತ ಬಾಲಕ. ಟಿ.ನರಸೀಪುರ ಪಟ್ಟಣದ ಶ್ರೀರಾಂಪುರ ನಿವಾಸಿ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಬಂದಿದ್ದ. ನದಿಗೆ ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಬಾಲಕ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.