ಬೆಂಗಳೂರು : ಕಾಂಗ್ರೆಸ್ ಶಾಸಕ ಹ್ಯಾರಿಸ್ ಕಾಂಗ್ರೆಸ್ ಶಾಸಕ ಹ್ಯಾರಿಸ್ ಗೆ ಸಂಕಷ್ಟ ಎದುರಾಗಿದ್ದು, ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಲು ಹೈಕೋರ್ಟ್ ಅಸ್ತು ಎಂದಿದೆ.
ತಮ್ಮ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಶಾಸಕ ಎನ್ ಎ ಹ್ಯಾರೀಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕಳೆದ ಚುನಾವಣೆ ವೇಳೆ ಸಲ್ಲಿಸಲಾದ ಫಾರಂ ನಂ. 26ರಲ್ಲಿ ಶಾಂತಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರೀಸ್ ತಮ್ಮ ಆಸ್ತಿ ವಿವರಗಳನ್ನು ಸರಿಯಾಗಿ ಘೋಷಿಸಿಲ್ಲ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ. ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಾಂತಿ ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎsನ್. ಎ. ಹ್ಯಾರೀಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ ಎಂದು ತಕರಾರು ಅರ್ಜಿ ಸಲ್ಲಿಸಿದ್ದರು.