ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆಯಾಗಿದೆ.
ದೆಹಲಿ ಸಿಎಂ, ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಆರೋಗ್ಯ ಸಚಿವರಾಗಿರುವ ಸತ್ಯೇಂದ್ರ ಜೈನ್ ಹಾಗೂ ಅವರ ಸಹಾಯಕನ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ.
ಶೋಧದ ವೇಳೆ 2 ಕೋಟಿ ರೂಪಾಯಿ ನಗದು ಮತ್ತು 1.8 ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ವೈಭವ್ ಜೈನ್, ಅಂಕುಶ್ ಜೈನ್, ನವೀನ್ ಜೈನ್ ಅವರು ರಾಮ್ ಪ್ರಕಾಶ್ ಜ್ಯುವೆಲರ್ಸ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದಾರೆ. ಅಲ್ಲದೇ, ಅವರು ಮನಿ ಲಾಂಡರಿಂಗ್ ನಲ್ಲಿ ಸತ್ಯೇಂದ್ರ ಜೈನ್ ಗೆ ನೇರ ಅಥವಾ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ ಎಂದು ಹೇಳಲಾಗಿದೆ.
ಜೂನ್ 9 ರವರೆಗೆ ಜೈನ್ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಜೈನ್ ಅವರನ್ನು ಮೇ 30 ರಂದು ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಲಾಯಿತು.