ಬಸ್, ಗೂಡ್ಸ್ ಲಾರಿ ನಡುವೆ ಡಿಕ್ಕಿಯಾಗಿ ಬೆಂಕಿ ತಗುಲಿದ್ದು ಓರ್ವ ಸಜೀವ ದಹನವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಲಾರಿ-ಬಸ್ ಗಳು ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಬಸ್ ನಿಂದ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ. ಲಾರಿಯಿಂದ ಹೊರಬರಲಾರದೆ ಚಾಲಕ ಸಜೀವ ದಹನವಾಗಿದ್ದಾರೆ.ಕಡಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.