
ಮುಂಬೈ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂದಿ ಧಾರಾವಾಹಿ ನಟ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ.
ನಟ ಅಮನ್ ಜೈಸ್ವಾಲ್ (23) ಮೃತರು. ಧರ್ತಿಪುರ ನಂದಿನಿ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಮನ್ ಜೈಸ್ವಾಲ್ ನನ್ನು ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಅಮನ್ ಜೈಸ್ವಾಲ್ ಸಾವನ್ನಪ್ಪಿದ್ದಾಗಿ ಅಂಬೋಲಿ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.