ನವದೆಹಲಿ: ಹಿಟ್ & ರನ್ ಕೇಸ್ ಗೆ 10 ವರ್ಷ ಜೈಲು ಶಿಕ್ಷೆ ಭಾರಿ ದಂಡ ವಿಧಿಸುವ ಕೇಂದ್ರ ಸರ್ಕಾರದ ಹೊಸ ಕಾನೂನು ಜಾರಿಗೆ ವಿರೋಧಿಸಿ ಟ್ರಕ್ ಚಾಲಕರು ಮುಷ್ಕರ ಆರಂಭಿಸಿದ್ದು, ರಾಷ್ಟ್ರೀಯಯ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಹಿಟ್ & ರನ್ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸುವ ಹೊಸ ಕಾನೂನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ಕಾನೂನು ಜಾರಿಗೆ ಟ್ರಕ್, ಬಸ್ ಹಾಗೂ ಲಾರಿ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೂತನ ಕಾನೂನು ಜಾರಿಫ಼ೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟ್ರಕ್ ಗಳನ್ನು ನಿಲ್ಲಿಸಿ, ರಸ್ತೆ ತಡೆ ನಡೆಸಿ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಹರಿಯಾಣ, ಪಂಜಾಬ್, ಬಿಹಾರ್, ಉತ್ತರ ಪ್ರದೇಶಗಳಲ್ಲಿ ಟ್ರಕ್ ಚಾಲಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ರಸ್ತೆಗಳಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ.
ಮಾಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ನಾಗ್ಪುರ, ಗೊಂಡಿಯಾ ಜಿಲ್ಲೆಗಳಲ್ಲಿ ಚಾಲಕರು ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.