alex Certify BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ: ಲಾರಿಗೆ ಕಾರ್ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭೀಕರ ಅಪಘಾತ ನಡೆದಿದೆ.

ಕಾರ್ ನ ಟೈಯರ್ ಸ್ಪೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರ್ ನಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಜಪ್ಪ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಕಿ, ರಶ್ಮಿಕಾ ಮೃತಪಟ್ಟವರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...