
ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು ರಸ್ತೆಯ ಪಾರ್ಲೆ ಜಿ ಫ್ಯಾಕ್ಟರಿ ಸಮೀಪದ ಟೋಲ್ ಬಳಿ ನಡೆದಿದೆ.
ಲಗ್ಗೆರೆ ನಿವಾಸಿ ಬಸವರಾಜ(37) ಮೃತಪಟ್ಟ ವ್ಯಕ್ತಿ. ರಾಯಚೂರು ಜಿಲ್ಲೆ ಸಿಂಧನೂರು ಮೂಲದ ಬಸವರಾಜ ಕೂಲಿ ಕಾರ್ಮಿಕನಾಗಿದ್ದು, ಲಗ್ಗೆರೆಯಲ್ಲಿ ನೆಲೆಸಿದ್ದರು. ಮುಂಜಾನೆ ಮಳೆ ಬರುತ್ತಿದ್ದ ಕಾರಣ ಟೋಲ್ ಬಳಿ ನಿಂತಿದ್ದ ಸರಕು ಸಾಗಣೆ ಲಾರಿಯೊಂದರ ಕೆಳಗೆ ಹೋಗಿ ನಿದ್ದೆಗೆ ಜಾರಿದ್ದಾರೆ.
ಲಾರಿ ಚಾಲಕ ಟೀ ಕುಡಿದು ಬಂದ ಬಳಿಕ ಕೆಳಗೆ ಗಮನಿಸದೇ ಲಾರಿಯನ್ನು ಏಕಾಏಕಿ ಚಾಲನೆ ಮಾಡಿಕೊಂಡು ತೆರಳಿದ್ದು, ಚಕ್ರಗಳು ಹರಿದು ಬಸವರಾಜ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪೀಣ್ಯ ಸಂಚಾರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.