
ಚಿತ್ರಕೂಟ: ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ.
ಚಿತ್ರಕೂಟದ ಅಮನ್ ಪುರದಲ್ಲಿ ಈ ದುರಂತ ಸಂಭವಿಸಿದೆ. ಟ್ರಕ್ ಹಾಗೂ ಇ-ರೀಕ್ಷಾ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಎಸ್ ಪಿ ಚಕ್ರಪಾಣಿ ತ್ರಿಪಾಠಿ ತಿಳಿಸಿದ್ದಾರೆ. ಝ್ಹಾನ್ಸಿ-ಮಿರ್ಜಾಪುರ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ಸಂಭವಿಸಿದೆ.