ಬೆಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲು ನೂತನ ಭಾರತೀಯ ಸಂಹಿತೆಯಲ್ಲಿ ಅವಕಾಶ ನೀಡಲಾಗಿದೆ. ಇದನ್ನು ವಿರೋಧಿಸಿ ಜನವರಿ 17 ರಿಂದ ಲಾರಿ ಮಾಲೀಕರು ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ.
ನೂತನ ಕಾಯ್ದೆಯಿಂದಾಗಿ ಲಾರಿ ಚಾಲಕರು ಭಯಭೀತರಾಗಿದ್ದು, ಲಾರಿ ಮಾಲೀಕರಿಗೂ ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರ ಕೂಡಲೇ ಕಾಯ್ದೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಲಾಗಿದೆ.
ಜನವರಿ 16ರೊಳಗೆ ಪ್ರಸ್ತಾವನೆ ಕೈ ಬಿಡದಿದ್ದರೆ ಜನವರಿ 17 ರಿಂದ ಸರಕು ಸಾಗಣೆ ವಾಹನಗಳ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಬಿ. ಚೆನ್ನಾರೆಡ್ಡಿ ತಿಳಿಸಿದ್ದಾರೆ.