
ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಭಕ್ತರ ಪ್ರವಾಹವೇ ಹರಿದುಬಂದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇವಾಲಯಕ್ಕೆ ಭಾರಿ ಪ್ರಮಾಣದಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.
ಬಾರಿ ಜನದಟ್ಟಣೆ ಉಂಟಾಗಿದ್ದು, ಕಳೆದ ಎರಡು ಮೂರು ದಿನಗಳಿಂದ ದರ್ಶನ ಪಡೆಯಲು 30 ಗಂಟೆ ಸರತಿ ಸಾಲಿನಲ್ಲಿ ಕಾಯಬೇಕಿದೆ. 30 ಗಂಟೆ ಕಾದ ನಂತರ ದರ್ಶನಕ್ಕೆ ಅವಕಾಶ ಸಿಗುತ್ತಿದೆ.
ಬುಧವಾರ ಒಂದೇ ದಿನ 79,207 ಭಕ್ತರು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. 3.19 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ ಎಂದು ಟಿಟಿಡಿ ಮಾಹಿತಿ ನೀಡಿದೆ.