ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶಾದ್ಯಂತ ಕೊರೋನಾ ಎರಡನೇ ಆತಂಕವನ್ನು ಉಂಟು ಮಾಡಿದೆ. ಕೊರೋನಾ ನಂತರದಲ್ಲಿ ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ತೀವ್ರವಾಗಿ ಏರಿಕೆ ಕಂಡಿದೆ.
ಸದ್ಯ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ತಿರುಪತಿ ತಿರುಮಲದಲ್ಲಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸರ್ವದರ್ಶನ ಟೋಕನ್ ವಿತರಣೆಯನ್ನು 22 ಸಾವಿರದಿಂದ 15 ಸಾವಿರಕ್ಕೆ ಇಳಿಕೆ ಮಾಡಲಾಗುವುದು. ಇದರೊಂದಿಗೆ ಆನ್ಲೈನ್ ವಿಶೇಷ ದರ್ಶನ ಟಿಕೆಟ್ ಗಳನ್ನು ಕಡಿತ ಮಾಡಲಾಗುವುದು.
ತಿರುಮಲ ತಿರುಪತಿಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇದರೊಂದಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸೋಂಕಿನ ಲಕ್ಷಣ ಇರುವ ಭಕ್ತರು ತಿರುಮಲಕ್ಕೆ ಭೇಟಿ ನೀಡದಂತೆ ನಿರ್ಬಂಧವಿದೆ ಎಂದು ಟಿಟಿಡಿ ಅಧಿಕಾರಿಗಳು ಹೇಳಿದ್ದಾರೆ.