ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆಲುಗಿನಲ್ಲಿ ಪ್ರಸಾರವಾಗುತ್ತಿದ್ದ ತಿರುಮಲ ತಿರುಪತಿ ದೇವಸ್ಥಾನ ನಿರ್ವಹಿಸುವ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಇನ್ನು ಮುಂದೆ ಕನ್ನಡದಲ್ಲಿಯೂ ಪ್ರಸಾರವಾಗಲಿದೆ.
ಅಕ್ಟೋಬರ್ 11 ರಿಂದ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರಸಾರವಾಗಲಿದೆ. ಬ್ರಹ್ಮೋತ್ಸವದ ಗರುಡ ಸೇವೆ ಆಚರಣೆ ವೇಳೆಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಾಹಿನಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಆಹ್ವಾನ ನೀಡಿದೆ.