ತುಮಕೂರು: ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ಸೀಗೇಹಳ್ಳಿ ಅರಣ್ಯ ವಲಯದಲ್ಲಿ ಕಮಗಾರಿಯನ್ನು ನಡೆಸದೇ ಬಿಲ್ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಅರಣ್ಯ ಇಲಾಖೆ ಮೇಲೆ ಬಂದಿದೆ. ಅರಣ್ಯ ಇಲಕಹೆಯಲ್ಲಿ ಅಕ್ರಮ ನಡೆದಿರುವ ವಿಚರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಡುವೆ ಆರೋಪ-ಪ್ರತ್ಯಾರೋಪ ಪ್ರಾರಂಭವಾಗಿದ್ದು, ವಾಗ್ವಾದ ಹೊಡೆದಾಡಿಕೊಳ್ಳುವ ಹಂತಕ್ಕೂ ತಲುಪಿದೆ.
ಅರಣ್ಯ ಸಿಬ್ಬಂದಿ ಮೇಲೆ ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಸಿ.ಆರ್.ಅರುಣ್ ಹಾಗೂ ಕಿಬ್ಬನಹಳ್ಳಿ ಉಪ ವಲಯ ಅರಣ್ಯಾಧಿಕರಿ ಹೆಚ್.ಮಂಜುನಾಥ್ ಹಲ್ಲೆ ನಡೆಸಿದ್ದಾರೆ. ಗಸ್ತು ಅರಣ್ಯ ಪಾಲಕ ನಂದೀಶ್ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚಿಕ್ಕನಾಯಕನಹಳ್ಳಿ ವಲಯ ಅರಣ್ಯಾಧಿಕಾರಿ ಸಿ.ಆರ್.ಅರುಣ್ ಹಾಗೂ ಕಿಬ್ಬನಹಳ್ಳಿ ಉಪ ವಲಯ ಅರಣ್ಯಾಧಿಕರಿ ಹೆಚ್.ಮಂಜುನಾಥ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಜನವರಿ 25ರಂದು ಬೆಂಗಳೂರಿಗೆ ಆರೋಗ್ಯ ತಪಾಸಣೆಗೆಂದು ಹೋಗಿದ್ದ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಗುಬ್ಬಿ ರಿಂಗ್ ರಸ್ತೆಯ ಚೆನ್ನಶೆಟ್ಟಿಹಳ್ಳಿ ಸಮೀಪ ಹೊಡೆದಾಡಿಕೊಂಡಿದ್ದಾರೆ. ಪ್ರಕರಣದ ಬಗ್ಗೆ ಅರಣ್ಯ ಇಲಾಖೆ ತನಿಖೆಗೆ ಮುಂದಾಗಿದೆ.