ತುಮಕೂರು: ವೃದ್ಧ ದಂಪತಿ ಇದ್ದ ತೋಟದ ಮನೆಗೆ ನುಗ್ಗಿದ ದರೋಡೆಕೋರರು, ಚಿನ್ನಾಭರಣ, ಹಣ, ಮೊಬೈಲ್ ಫೋನ್ ದೋಚಿ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಮಧುರೆ ಗ್ರಾಮದಲ್ಲಿ ನಡೆದಿದೆ.
ಮೊಲ ಹಿಡಿಯುವ ನೆಪದಲ್ಲಿ ಬಂದ ಕಳ್ಳರ ಗುಂಪು ತೋಟದ ಮನೆಗೆ ನುಗ್ಗಿ ಮನೆಯಲ್ಲಿದ್ದ ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿ ಎಸ್ಕೇಪ್ ಆಗಿದೆ.
ಚನ್ನೇಗೌಡ (75) ಹಾಗೂ ಅವರ ಪತ್ನಿ ಮೇಲೆ ಹಲ್ಲೆ ನಡೆದಿದೆ. ಮನೆಯಲ್ಲಿದ್ದ ಎರಡು ಲಕ್ಷ ರೂ.ಮೌಲ್ಯದ ಚಿನ್ನ, ಹಣ ಕದ್ದು ಪರಾರಿಯಾಗಿದ್ದಾರೆ. ಗಾಯಳು ಚನ್ನೇಗೌಡ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.