
ತುಮಕೂರು: ಸ್ನೇಹಿತನ ಜೊತೆ ಪತ್ನಿ ಪರಾರಿಯಾಗಿದ್ದಾಳೆ ಎಂದು ಆರೋಪಿಸಿ ಪತಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ.
ನಾಗೇಶ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಪತ್ನಿ ರಂಜಿತಾಗೆ ಸ್ನೇಹಿತ ಭರತ್ ಜೊತೆ ಅಕ್ರಮ ಸಂಬಂಧವಿದೆ ಎಂದು ಆರೋಪಿಸಿರುವ ನಾಗೇಶ್, ಆತನೊಂದಿಗೆ ಪತ್ನಿ ಓಡಿಹೋಗಿದ್ದಾಳೆ ಎಂದು ಆರೋಪಿಸಿದ್ದಾನೆ. ತನ್ನ ಸಾವಿಗೆ ಪತ್ನಿ ಹಾಗೂ ಸ್ನೇಹಿತನೇ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.