ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೋಟಬಂಡೆ ಗ್ರಾಮದ ಈಶ್ವರಪ್ಪ (36) ಹಗೂ ನಾಗರಾಜು (42) ಮೃತ ದುರ್ದೈವಿಗಳು.
ಘಟನೆಯಲ್ಲಿ ಚಿಕ್ಕತಿಮ್ಮನಹಟ್ಟಿ ಗ್ರಾಮದ ದರ್ಶನ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ. ಗೌರಸಂಧ್ರ ಮಾರಮ್ಮ ಜಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.