ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ಈ ಅಪಘಾತ ಸಂಭವಿಸಿದೆ. ಹರೀಶ್ (21) ಮೃತ ದುರ್ದೈವಿ. ಬೆಂಗಳೂರು ನಗರದ ದೊಮ್ಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.
ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರ ಹರೀಶ್ ಮೇಲೆ ಹರಿದಿದೆ. ಪರಿಣಾಮ ಅಪಘಾತದ ಭೀಕರತೆಗೆ ಹರೀಶ್ ದೇಹ ಎರಡು ತುಂಡಾಗಿ ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.