alex Certify BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ಈ ಅಪಘಾತ ಸಂಭವಿಸಿದೆ. ಹರೀಶ್ (21) ಮೃತ ದುರ್ದೈವಿ. ಬೆಂಗಳೂರು ನಗರದ ದೊಮ್ಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.

ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸವಾರ ಹರೀಶ್ ಮೇಲೆ ಹರಿದಿದೆ. ಪರಿಣಾಮ ಅಪಘಾತದ ಭೀಕರತೆಗೆ ಹರೀಶ್ ದೇಹ ಎರಡು ತುಂಡಾಗಿ ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...