alex Certify BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಬೆಂಕಿ ಅವಘಡ

ತುಮಕೂರು: ಮೆಡಿಸಿನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಫ್ಯಾಕ್ಟರಿ ತುಂಬೆಲ್ಲ ಬೆಂಕಿ ಆವರಿಸಿರುವ ಘಟನೆ ತುಮಕೂರಿನ ವಸಂತನರಸಾಪುರದಲ್ಲಿ ನಡೆದಿದೆ.

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವೀರೇಶ್ ಇಂಡಸ್ಟ್ರಿಯಲ್ ಫಾರ್ಮಾಸ್ಯೂಟಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಕೆಮಿಕಲ್ ಗಳು ಬೆಂಕಿಗಾಹುತಿಯಾಗಿವೆ.

ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...