ತುಮಕೂರು: ದೇವರ ಮೂರ್ತಿಯ ಮೇಲೆ ಯುವಕನೊಬ್ಬ ಕಾಲಿಟ್ಟು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದು, ಆತನನ್ನು ಗ್ರಾಮಸ್ಥರು ಥಳಿಸಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಬ್ಬೆಘಟ್ಟ ಗ್ರಾಮದ ಶ್ರೀಕಾಂತ ಎಂಬ ಯುವಕ ದೇವಾಲಯವೊಂದರ ದೇವರ ಮೇಲೆ ಕಾಲಿಟ್ಟು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ವಿಡಿಯೋ ವೈರಲ್ ಆಗಿದ್ದು, ಆಕ್ರೋಶಗೊಂಡ ಗ್ರಾಮಸ್ಥರು ಶ್ರೀಕಾಂತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.