
ತುಮಕೂರು: ತುಮಕೂರು ತಾಲೂಕಿನ ಕಟ್ಟಿಗೆನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಕಾರ್ ನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಮೂವರು ಮೃತಪಟ್ಟಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ. ಮೂವರು ಮಕ್ಕಳು ಪಾರಾಗಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಶಿರಾ ಕಡೆಗೆ ತೆರಳುತ್ತಿದ್ದ ಕಾರ್ ಡಿಕ್ಕಿ ಹೊಡೆದಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.