ತುಮಕೂರು: ಕುಣಿಗಲ್ ತಾಲ್ಲೂಕಿನ ಬೇಗೂರು ಬೈಪಾಸ್ ಬಳಿ ಕಾರ್ -ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ರಘು(27) ಮತ್ತು ಸಂತೋಷ್(21) ಮೃತಪಟ್ಟವರೆಂದು ಹೇಳಲಾಗಿದೆ. ಟಿಟಿ ವಾಹನದಲ್ಲಿದ್ದ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.