alex Certify ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನೋವಾ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ.

ಕುಣಿಗಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಹೇರೂರು ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ಚಾಲಕ ಹೊಳೆನರಸೀಪುರದ ಸುನಿಲ್(30) ಹಾಗೂ ಮತ್ತೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಾಸನ ಕಡೆಗೆ ತೆರಳುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...