alex Certify BREAKING NEWS: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ, ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ, ಮೂವರ ಸಾವು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ತರೂರು ಗೇಟ್ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ತೆರಳುತ್ತಿದ್ದ ತಂದೆ, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಅವಿನಾಶ್(28), 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತಪಟ್ಟವರು ಎಂದು ಹೇಳಲಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಸ್ವಿಫ್ಟ್ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...