
ತುಮಕೂರು: ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ನಡೆದಿದೆ.
ಒಂದು ಕಾರ್ ನಲ್ಲಿದ್ದ ಇಬ್ಬರು, ಮತ್ತೊಂದು ಕಾರ್ ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮೃತರ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.