alex Certify BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. ಕಾರ್ ನಲ್ಲಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದಲ್ಲಿ ಗೆಳೆಯನ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬರುತ್ತಿದ್ದರು. ಕಾರ್ ಅತಿ ವೇಗವಾಗಿ ಚಲಿಸುತ್ತಿದ್ದರಿಂದ ನಿಯಂತ್ರಣಕ್ಕೆ ಸಿಗದೇ ಸೇತುವೆ ಗೋಡೆಗೆ ಡಿಕ್ಕಿ ಹೊಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...