ತುಮಕೂರು: ಟೆಂಪೋ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಗ್ರಾಮದ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 10ಕ್ಕೂ ಅಧಿಕ ಕಾರ್ಮಿಕರು ಗಾಯಗೊಂಡಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲವರಿಗೆ ತೀವ್ರ ಗಾಯಗಳಾಗಿವೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.