
ತುಮಕೂರು: ಹಳ್ಳಕ್ಕೆ ಖಾಸಗಿ ಬಸ್ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ರಸ್ತೆ ಗುಂಡಿಯಿಂದಾಗಿ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.