alex Certify ರಸ್ತೆ ಗುಂಡಿಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್, ಅಪಾಯದಿಂದ ಪಾರಾದ ಪ್ರಯಾಣಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಗುಂಡಿಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್, ಅಪಾಯದಿಂದ ಪಾರಾದ ಪ್ರಯಾಣಿಕರು

ತುಮಕೂರು: ಹಳ್ಳಕ್ಕೆ ಖಾಸಗಿ ಬಸ್ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವಿರೂಪಸಮುದ್ರ ಗ್ರಾಮದ ಬಳಿ ತಡರಾತ್ರಿ ಖಾಸಗಿ ಬಸ್ ಹಳ್ಳಕ್ಕೆ ಬಿದ್ದಿದೆ. ರಸ್ತೆ ಗುಂಡಿಯಿಂದಾಗಿ ನಿಯಂತ್ರಣ ತಪ್ಪಿದ ಬಸ್ ಉರುಳಿ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...