ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ.
ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ ನಿಗದಿಯಾಗಿದೆ ಎಂದು ಹೇಳಲಾಗಿದೆ.
ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗೊಲ್ಲಹಳ್ಳಿಯಲ್ಲಿ 41 ಎಕರೆ ಪ್ರದೇಶವನ್ನು ಗುರುತಿಸಿ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಜಿಲ್ಲಾಡಳಿತ ನೀಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮಾದರಿಯಲ್ಲಿ ಗೊಲ್ಲಹಳ್ಳಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಉದ್ದೇಶಿಸಲಾಗಿದೆ. ದಶಕದಿಂದ ತುಮಕೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಬೇಡಿಕೆ ಇತ್ತು. ಇದೀಗ ಕಾಲ ಕೂಡಿ ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ 2ರಂದು ನೂತನ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಮಾದರಿಯಲ್ಲಿ ಅತ್ಯಾಧುನಿಕ ಕ್ರಿಕೆಟ್ ಸ್ಟೇಡಿಯಂ ತುಮಕೂರು ಜಿಲ್ಲೆಯಲ್ಲಿ ನಿರ್ಮಾಣವಾಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.