
ತುಮಕೂರು: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಸೇರಿ ಹಲವರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ವಿದ್ಯಾನಗರದಲ್ಲಿ ಒಂದೇ ಏರಿಯಾದಲ್ಲಿ ಬರೋಬ್ಬರಿ 21 ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದು, ಆರು ವಿದ್ಯಾರ್ಥಿಗಳು ಸೇರಿದಂತೆ 21 ಜನರಿಗೆ ಕಚ್ಚಿದೆ.
ಗಾಯಾಳುಗಳಿಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಿಕ್ಕನಾಯನಕಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.