alex Certify BIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ; 9 ಹಸುಗಳು, 20 ಮೇಕೆಗಳು ಸಜೀವದಹನ

ತುಮಕೂರು: ಕೊಟ್ಟಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 9 ಹಸುಗಳು, 20 ಮೇಕೆಗಳು ಸಜೀವದಹನಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾರನಹಳ್ಳಿ ನಿವಾಸಿ ಚಿಕ್ಕಣ್ಣ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಈ ದುರಂತ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ 9 ಹಸುಗಳು, 20 ಮೇಕೆಗಳು ಬೆಂಕಿಗಾಹುತಿಯಾಗಿದ್ದು, 5 ಜಾನುವಾರುಗಳನ್ನು ರಕ್ಷಿಸಲಾಗಿದೆ.

ಕೊಟ್ಟಿಗೆ ಬಳಿ ಇದ್ದ ಕೃಷಿ ಉಪಕರಣಗಳು, ಅಡಿಕೆ, ಒಂದು ಟ್ರ್ಯಾಕ್ಟರ್ ಕೂಡ ಬೆಂಕಿಗಾಹುತಿಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...