
ತುಮಕೂರು: ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರು ಗಾಯಗೊಂಡ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ತುಮಕೂರು ತಾಲೂಕಿನ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಇರುವ ಜೋದಾನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.