
ತುಮಕೂರು: ನಾಮಕರಣ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿಯಿಂದ ಒಬ್ಬರು ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿತ್ತು. ಹೆಜ್ಜೇನು ದಾಳಿಯಿಂದಾಗಿ ಗಾಯಗೊಂಡಿದ್ದ 47 ವರ್ಷದ ವೀರಭದ್ರಯ್ಯ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.