ತುಮಕೂರು: ತುಮಕೂರು ನಗರದ ರೈಲು ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರಿಡಲು ಸಮ್ಮತಿ ದೊರೆತಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಭಾನುವಾರ ತಮ್ಮ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ದಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮತಿಸಿದ್ದಾರೆ ಎಂದು ಹೇಳಿದ್ದಾರೆ.
ತುಮಕೂರು ನಗರದ ರೈಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರಿಡಲು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ಧಗಂಗಾ ನಿಲ್ದಾಣ ಎಂದು ಹೆಸರಿಡು ಪತ್ರಗಳು ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಅಮಿತ್ ಶಾ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲು ನಿಲ್ದಾಣಗಳನ್ನು 2,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ 61 ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.