alex Certify ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕನಿಗೆ ಗಾಯ

ತುಮಕೂರು: ಶಿವಮೊಗ್ಗ –ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ.

ತುಮಕೂರು ತಾಲೂಕಿನ ಕ್ಯಾತ್ಸಂದ್ರ ರೈಲ್ವೆ ನಿಲ್ದಾಣದ ಬಳಿ ಶಿವಮೊಗ್ಗ -ಯಶವಂತಪುರ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಜನರಲ್ ಕೋಚ್ ನಲ್ಲಿದ್ದ ಗುರುಮೂರ್ತಿ ಎಂಬವರಿಗೆ ಗಾಯವಾಗಿದೆ. ಚಲಿಸುತ್ತಿದ್ದ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...