ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ರಾಜೀನಾಮೆ ನೀಡಿರುವ ಬಗ್ಗೆ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಸುರೇಶ್ ಗೌಡ ಜಿಲ್ಲಾಧ್ಯಕ್ಷರಾದ ನಂತರ ಕ್ಷೇತ್ರದ ಕೆಲಸ ಮಾಡಲು ಆಗಿಲ್ಲ. ಹೀಗಾಗಿ ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಒಂದೂವರೆ ವರ್ಷದ ಹಿಂದೆ ಅವರು ಜಿಲ್ಲಾಧ್ಯಕ್ಷರಾಗಿ ನೇಮಕವಾಗಿದ್ದರು. ಇವತ್ತು ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಿದ ಕಾರಣ ಬಹಿರಂಗಪಡಿಸುವ ಸಾಧ್ಯತೆ ಇದೆ. ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿ, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಕ್ಷೇತ್ರದ ಜನರ ಕೆಲಸ ಮಾಡಲು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.