alex Certify ಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ವೃಂದಗಳ 29 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಇಂಜಿನಿಯರ್, ಸಹಾಯಕ ವ್ಯವಸ್ಥಾಪಕ ಎಫ್ ಅಂಡ್ ಎಫ್, ವೈದ್ಯಾಧಿಕಾರಿ ಆಡಳಿತ ಅಧಿಕಾರಿ, ಉಗ್ರಾಣಾಧಿಕಾರಿ ಸೇರಿದಂತೆ 34 ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಈ ಹಿಂದಿನ ಸುತ್ತೋಲೆಯಲ್ಲಿ ಕೆಲವು ತಿದ್ದುಪಡಿ ಮಾಡಿ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಜೂನ್ 6 ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 500 ರೂಪಾಯಿ, ಇತರರಿಗೆ 1000 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹುದ್ದೆಗಳು ವಿದ್ಯಾರ್ಹತೆ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ https://www.tumul.coop ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...