ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ ಬಳಿ ತುಂಗಾ ನಾಲೆ ಒಡೆದು ಸಾವಿರಾರು ಜಮೀನುಗಳಿಗೆ ನೀರು ನುಗ್ಗಿದೆ.
ಬಸವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜಮೀನು, ರಸ್ತೆಗಳಲ್ಲಿ ನಾಲೆ ನೀರು ಹರಿದಿದೆ. ತುಂಗಾ ಕಾಲವೆಯಿಂದ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಜಮೀನುಗಳು ಜಲಾವೃತಗೊಂಡು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ನಿರ್ಲಕ್ಷ ವಹಿಸಿದ್ದಾರೆ. ನೀರು ಹೀಗೆ ಹರಿದರೆ ಬೆಳೆ ನಾಶವಾಗುವ ಭೀತಿಯಲ್ಲಿ ರೈತರಿದ್ದಾರೆ.
ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರು ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಕಾಲುವೆ ದುರಸ್ತಿ ಮಾಡುವವರೆಗೆ ನೀರು ಬಂದ್ ಮಾಡುವಂತೆ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ನ್ಯಾಮತಿ ತಾಲೂಕಿನ ಬಸವನಹಳ್ಳಿ ಗ್ರಾಮದ ಹತ್ತಿರ ತುಂಗಾ ಮೇಲ್ದಂಡೆ ನಾಲೆ ಒಡೆದಿದ್ದು, ರೈತರು ಬೆಳೆದ ಅಡಿಕೆ, ಭತ್ತ, ಮೆಕ್ಕೆಜೋಳ, ಹತ್ತಿ ಹಾಗೂ ತರಕಾರಿ ಸೇರಿದಂತೆ ಸಾವಿರಾರು ಎಕರೆ ಬೆಳೆಗಳು ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳೀಯ ಮುಖಂಡರು ರೈತರು ಕರೆ ಮಾಡಿ ನನಗೆ ವಿಷಯ ತಿಳಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ನೀರನ್ನು ನಿಲ್ಲಿಸಲು ತಿಳಿಸಿದ್ದು, ತಕ್ಷಣಕ್ಕೆ ನೀರನ್ನು ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದು ಇನ್ನೇರೆಡು ದಿನಗಳಲ್ಲಿ ತುರ್ತು ಕಾಮಗಾರಿ ನಡೆಸಿ ಸಂಪೂರ್ಣವಾಗಿ ನೀರನ್ನು ನಿಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
https://www.facebook.com/reel/1642373526610033
https://www.facebook.com/watch/?v=3786223278333362&ref=sharing