ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ನೀರಿನ ಅಬ್ಬರಕ್ಕೆ ಕೊಚ್ಚಿ ಹೋಗಿ, ಅವಾಂತರ ಸೃಷ್ಟಿಯಾಗಿತ್ತು. ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿದ್ದರಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಹೋಗುತ್ತಿದ್ದು, ತುಂಗಭದ್ರಾ ನದಿ ತೀರದಲ್ಲಿ, ಸುತಮುತ್ತಲ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿತ್ತು. ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಆರಂಭಗಿರುವಾಗಲೇ ಕೊಚ್ಚಿ ಹೋಗಿದ್ದ ಗೇಟ್ ಪತ್ತೆಯಾಗಿದೆ.
ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಮೂರನೇ ಎಲಿಮೆಂಟ್ ಯಶಸ್ವಿಯಾಗಿ ಅಳವಡಿಸಲಾಗಿದೆ. ನೀರಿನ ಹೊರಹರಿವು ಸಂಪೂರ್ಣ ಬಂದ್ ಮಾಡಿ ಗೇಟ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಡ್ಯಾಂ ನೀರಿನ ಒತ್ತಡ, ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಕೊಚ್ಚಿ ಹೋಗಿದ್ದ ಕ್ರಸ್ಟ್ ಗೇಟ್ ನೀರಿನಲ್ಲಿ ಪತ್ತೆಯಾಗಿದೆ. ಜಲಾಶಯದ ಮುಂದೆ ಕೆಳಭಾಗದಲ್ಲಿ 19ನೇ ಕ್ರಸ್ಟ್ ಗೇಟ್ ಪತ್ತೆಯಾಗಿದೆ.