ಬೆಂಗಳೂರು: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಡ್ಯಾಂ (ಟಿ.ಬಿ.ಡ್ಯಾಂ) ಕ್ರಸ್ಟ್ ಗೇಟ್ ಮುರಿದು ಬಿದ್ದು, ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾಂ ಕ್ರಸ್ಟ್ ಗೇಟ್ ದುರಸ್ತಿ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತುಂಗಭದ್ರಾ ಡ್ಯಾಂ ದುರಸ್ತಿಗೆ ಸೂಚಿಸಲಾಗಿದೆ. ರೈತರ ಹಿತದೃಷ್ಟಿಯಿಂದ ತುರ್ತಾಗಿ ದುರಸ್ತಿ ಕೆಲಸ ಮಾಡಬೇಕಾಗಿದೆ. ಹಾಗಾಗಿ ತಕ್ಷಣ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಟಿ.ಬಿ.ಡ್ಯಾಂ ರೀತಿ ಬೇರೆ ಡ್ಯಾಂ ಗಳಲ್ಲಿಯೂ ಸಮಸ್ಯೆಯಾಗಿದೆಯೇ ಎಂಬುದನ್ನು ಪರಿಶೀಲಿಸಲು ತಿಳಿಸಲಾಗಿದೆ. ರಾಜ್ಯದ ವಿವಿಧ ಜಲಾಶಯಗಳ ಸುರಕ್ಷತೆ ಬಗ್ಗೆ ಮಾಹಿತಿ ಸಂಗ್ರಹಿಸಿ, ಡ್ಯಾಂ ಗಳಲ್ಲಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದರು.
ರೈತರು, ಗ್ರಾಮಸ್ಥರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಶೀಘ್ರವಾಗಿ ಟಿ.ಬಿ ಡ್ಯಾಂ ದುರಸ್ತಿ ನಡೆಯಲಿದೆ ಎಂದು ಹೇಳಿದರು.