ಕೊಪ್ಪಳ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿದ್ದು, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಂಗ್ ಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ್ದಾರೆ. ಡ್ಯಾಂ ದುರಸ್ತಿ ಬಗ್ಗೆ ತಜ್ಞರಿಯಿಂದ ಪರಿಶೀಲಿಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಟಿ.ಬಿ.ಡ್ಯಾಂಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ ಆಗಿ 8 ಟಿಎಂಸಿ ನೀರು ಪೋಲಾಗಿದೆ. 12 ಲಕ್ಷ ಎಕರೆ ಜಮೀನಿಗೆ ನೀರು ಒದಗಿಸುವ ಉದ್ದೇಶದಿಂದ ಡ್ಯಾಂ ನಿರ್ಮಿಸಲಾಗಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ರೈತರ ಜೀವನಾಧಾರವಾಗಿತ್ತು. ನಿನ್ನೆ ರಾತ್ರಿವರೆಗೆ 10 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ. 19ನೇ ಗೇಟ್ ಚೈನ್ ತುಂಡಾಗಿ ಮುರುದು ಬಿದ್ದಿದೆ ಎಂದು ಎಂದು ಹೇಳಿದರು.
ಸುರಕ್ಷತೆ ದೃಷ್ಟಿಯಿಂದ 98ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ತುಂಗಭದ್ರಾ ಡ್ಯಾಂಗ್ ಗೆ ಪ್ರಸ್ತುತ 28,056 ಕ್ಯೂಸೆಕ್ ಒಳಹರಿವು ಇದೆ. ಮುರಿದು ಬಿದ್ದಿರುವ ಗೇಟ್ ದುರಸ್ತಿ ಮಾಡಲು ನೀರಿನ ಪ್ರಮಾಣ ಇಳಿಸಲಾಗುವುದು. 19ನೇ ಗೇಟ್ ನ ಮೇಲೆ ಒತ್ತಡ ಕಡಿಮೆ ಮಾಡಲು ಹೆಚ್ಚಿನ ನೀರು ರಿಲೀಸ್ ಮಾಡಲಾಗುವುದು. ಉಳಿದ ಗೇಟ್ ಗಳ ಮೂಲಕ ಹೆಚ್ಚುವರಿ ನೀರು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.