ಬೆಂಗಳೂರು: ಟಿವಿ, ಫ್ರಿಜ್ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಲಾಗಿದೆ. ಫ್ರಿಡ್ಜ್ ಮತ್ತು ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ.
3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ 1.28 ಲಕ್ಷ ರೂಪಾಯಿ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈಗ ಬೈಕ್, ಟಿವಿ, ಫ್ರಿಜ್ ಇದ್ದರೂ ಬಿಪಿಎಲ್ ಕಾರ್ಡ್ ಮಾಡಲಾಗಿದೆ. ರಾಜ್ಯ ಸರ್ಕಾರದ ನಡೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.