
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ರೈತ ಆತ್ಮಹತ್ಯೆ ಎಂದು ಟ್ವೀಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆಯ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಹಿರಿಯ ವಕೀಲ ಅರುಣ್ ಶಾಮ್ ವಾದ ಮಂಡಿಸಿದ್ದರು. ವಿಚಾರಣೆ ಆಲಿಸಿದ ಹೈಕೋರ್ಟ್ ತೇಜಸ್ವಿ ಸೂರ್ಯ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿದೆ.