25ನೇ ಮಹಡಿಯಿಂದ ಬಿದ್ದ ಪರಿಣಾಮ ಅವಳಿ ಸಹೋದರರು ಸಾವನ್ನಪ್ಪಿದ ದಾರುಣ ಘಟನೆಯು ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ಯುವಕರಿಬ್ಬರು ಅವಳಿ ಸಹೋದರರಾಗಿದ್ದು, ತಮ್ಮ ಕುಟುಂಬಸ್ಥರ ಜೊತೆಯಲ್ಲಿ ಸಿದ್ಧಾರ್ಥ್ ವಿಹಾರ್ನಲ್ಲಿ ನೆಲೆಸಿದ್ದರು ಎನ್ನಲಾಗಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಈ ಇಬ್ಬರು ಸಹೋದರರು ಪ್ರತೀಕ್ ಗ್ರ್ಯಾಂಡ್ ಸೊಸೈಟಿಯಲ್ಲಿ ವಾಸವಿದ್ದರು ಎನ್ನಲಾಗಿದೆ. ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಆದರೆ ಈ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ರೀತಿಯ ದೂರು ದಾಖಲಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ ಇದೊಂದು ಸಹಜ ಸಾವು ಎಂದು ಪರಿಗಣಿಸಲಾಗಿದೆ. ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೇ ಈ ಸಂಬಂಧ ಅನೇಕರ ವಿಚಾರಣೆಯನ್ನೂ ನಡೆಸಿರುವ ಪೊಲೀಸರು ಸಾಕ್ಷ್ಯ ಕಲೆ ಹಾಕುವ ಪ್ರಯತ್ನದಲ್ಲಿದ್ದಾರೆ.