BIG NEWS : ಮಕ್ಕಳನ್ನು ಬಿಟ್ಟು ಮಹಿಳೆ ಸಮುದ್ರಕ್ಕೆ ಹಾರಿದ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಅಸಲಿ ಸತ್ಯ ಬಯಲು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಎಷ್ಟೇ ಹುಡುಕಿದರೂ ಮಹಿಳೆಯ ಶವ ಪತ್ತೆಯಾಗಿರಲಿಲ್ಲ. ನಂತರ ಪೊಲೀಸರಿಗೆ ಅನುಮಾನ ಶುರುವಾಗಿ ತನಿಖೆ ನಡೆಸಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ.

ಹೌದು, ಗಂಡನ ಮನೆಯವರನ್ನು ಹೆದರಿಸಲು ಎಂದು ಮಹಿಳೆ ಆತ್ಮಹತ್ಯೆಯ ನಾಟಕವಾಡಿದ್ದಳು ಎಂದು ತಿಳಿದು ಬಂದಿದೆ. ಹೊನ್ನಾವರದ ಬಾಡಿಗೆ ಮನೆಯೊಂದರಲ್ಲಿ ಈಕೆ ಅವಿತು ಕುಳಿತಿದ್ದರು.ಗಂಡನ ಮನೆಯವರಿಗೆ ಪಾಠ ಕಲಿಸುವ ಉದ್ದೇಶದಿಂದ ನಿವೇದಿತಾ ಈ ರೀತಿ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ಪುಟ್ಟ ಮಕ್ಕಳನ್ನು ಬಿಟ್ಟು ಹೋದ ಈ ಮಹಿಳೆ ಸದ್ಯ ಕುಮಟಾ ಪೊಲೀಸರ ಅತಿಥಿಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಬಳಿಕ ಮಾಂಗಲ್ಯ ಸರ, ಕಾಲುಂಗುರಗಳನ್ನು ಸ್ಕೂಟಿಯೊಳಗೆ ಇಟ್ಟು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read