ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸ್ಪೋಟದಲ್ಲಿ ಕರ್ನಾಟಕದ ಮೂಲದ ಇಬ್ಬರು ವೈದ್ಯರು ಭಾಗಿಯಾಗಿರುವುದು ಧೃಡವಾಗಿದೆ.
ಕೊಯಮತ್ತೂರು ಖಾಸಗಿ ಆಸ್ಪತ್ರೆ ಮೇಲೆ ಎನ್ ಐ ಎ ದಾಳಿ ನಡೆಸಿದಾಗ ಈ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಶಂಕಿತ ಉಗ್ರ ಮತೀನ್, ಶಾಜೀಬ್ ಗೆ ಹಣ ಸಂದಾಯ ಮಾಡಿರುವುದು ಬಯಲಾಗಿದೆ. ಇಬ್ಬರಿಗೂ ಹಣ ಸಂದಾಯ ಮಾಡಿದ ಹಿನ್ನೆಲೆ ಎನ್ ಐ ಎ ದಾಳಿ ನಡೆಸಿದೆ. ತಮಿಳುನಾಡಿನ ನಾರಾಯಣಗುರು ಖಾಸಗಿ ಆಸ್ಪತ್ರೆಯ ವೈದ್ಯರು ಇದರಲ್ಲಿ ಶಾಮೀಲಾಗಿದ್ದಾರೆ ಎನ್ನಲಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಉಗ್ರರ ಜೊತೆ ಸಂಪರ್ಕ ಹೊಂದಿದ್ದವರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಕೆಲ ಮಹತ್ವದ ದಾಖಲೆಗಳು ಲಭ್ಯವಾಗಿವೆ ಎಂದು ತ್ತಿಳಿದುಬಂದಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಮಾತ್ರವಲ್ಲ ಕೊಯಮತ್ತೂರ್ ನಲ್ಲಿಯೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಯಮತ್ತೂರ್ ವೈದ್ಯ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.