ತಿರುವನಂತಪುರಂ: ಕೇರಳದಲ್ಲಿ 15 ವರ್ಷದ ಇಬ್ಬರು ಹೆಣ್ಣುಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರ್ಯನಾಡು ಗ್ರಾಮಾಂತರ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ತಪ್ಪಾಗಿ ಭಾವಿಸಿ 15 ವರ್ಷದ ಇಬ್ಬರು ಬಾಲಕಿಯರಿಗೆ ಕೋವಿಡ್ ಲಸಿಕೆ ನೀಡಿದ್ದಾರೆ. ಅವರ ಪೋಷಕರಿಗೆ ಮಾಹಿತಿ ಗೊತ್ತಾಗಿ ಈ ಕುರಿತಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಡೋಸ್ ಪಡೆದ ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಸಿಬ್ಬಂದಿ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ಅಂದ ಹಾಗೆ, ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. 18 ವರ್ಷದೊಳಗಿನವರಿಗೆ ಲಸಿಕೆ ನೀಡಲು ಇನ್ನು ಸರ್ಕಾರ ಅನುಮತಿ ನೀಡಿಲ್ಲವಾದರೂ, ಕೇರಳದ ಆರೋಗ್ಯ ಸಿಬ್ಬಂದಿ ಇಬ್ಬರು ಅಪ್ರಾಪ್ತೆಯರಿಗೆ ಲಸಿಕೆ ನೀಡಿದ್ದಾರೆನ್ನಲಾಗಿದೆ.