
ಬೆಂಗಳೂರು: ಬೆದರಿಕೆಯೊಡ್ಡಿ ಹಣ ವಸೂಲಿ ಮಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆತ್ಮಾನಂದ್ ಹಾಗೂ ಆನಂದ್ @ ಫಿಗರ್ ಆನಂದ್ ಬಂಧಿತ ಆರೋಪಿಗಳು. ಈ ಇಬ್ಬರೂ ಯೂಟ್ಯೂಬ್ ಚಾನಲ್ ಗಳಲ್ಲಿ ಸುದ್ದಿ ಬಿತ್ತರಿಸುವುದಾಗಿ ಹೇಳಿ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು.
ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ, ಅಕ್ರಮ ಗೋಮಾಂಸ ಸಾಗಣೆ ವಾಹನ, ಸ್ಪಾಗಳಲ್ಲಿ ಬೆದರಿಕೆಯೊಡ್ಡಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.